ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ

ಸಮಗ್ರ ನ್ಯೂಸ್: ಬೆಂಗಳೂರು ಶನಿವಾರ (ಮೇ.27) ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ ಆಗಿದೆ.

Ad Widget ... ..

ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

Ad Widget

ಸಮಾಲೋಚನೆಯ ಬಳಿಕ ಸಂಪುಟಕ್ಕೆ 24 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶನಿವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ನೂತನ ಸಚಿವರು ಯಾರು?
ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್​, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಸ್​ಎಸ್​ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್​, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ​, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್​, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *