ಪುತ್ತೂರು: ನೂತನ ಗೃಹಪ್ರವೇಶದ ಎರಡನೇ ದಿನದಲ್ಲೇ ಆತ್ಮಹತ್ಯೆಗೆ ಶರಣಾದ ಯಜಮಾನ

ಸಮಗ್ರ ನ್ಯೂಸ್: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮೇ 29ರಂದು ಸಂಭವಿಸಿದೆ. ಇಲ್ಲಿನ ನಿವಾಸಿ ವಿಜಯ ಕುಮಾರ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

Ad Widget ... ..

ವಿಜಯಕುಮಾರ್ ಮನೆಯ ಹಿಂದುಗಡೆಯ ಶೆಡ್‌ನ‌ ಮೇಲ್ಛಾವಣಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಲುಂಗಿಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ 27ರಂದು ಮನೆಯ ಗೃಹಪ್ರವೇಶ ನಡೆದಿತ್ತು. ಮೇ 28ರಂದು ಅಮಲು ಪದಾರ್ಥ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *