ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಜೂ.1ರಂದು ಸಂಜೆ ಸಂಭವಿಸಿದೆ.

Ad Widget ... ..

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದಾಗ ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ ೭-೮ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅವರನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ ೩- ೪ ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *