Ad Widget .

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಅವಮಾನ| ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದಲ್ಲಿ ಸಂಪೂರ್ಣ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಆರಂಭಿಸಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಎಲ್ಲ ಸಚಿವರಿಗೂ ಕೊಠಡಿಗಳನ್ನು ಕೊಡಲಾಗಿದ್ದು, ಹಳೆಯ ಕೊಠಡಿಯನ್ನು ಸ್ವಚ್ಛಗೊಳಿಸಿ ಸುಣ್ಣ, ಬಣ್ಣ ಬಳಿಸಿ ತಮಗೆ ಬೇಕಾದಂತೆ ಆಲ್ಟ್ರೇಷನ್‌ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಈ ವೇಳೆ ದೇಶದ ನಡೆದಾಡುವ ದೇವರೆಂದೇ ಖ್ಯಾತರಾದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಫೋಟೋಗಳನ್ನು ಬೇಕಾಬಿಟ್ಟಿಯಾಗಿ ಹೊರಗೆ ಎಸೆದಿದ್ದಾರೆ.

Ad Widget . Ad Widget . Ad Widget .

ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, “ಕಾಂಗ್ರೆಸ್‌ ಸರ್ಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇದೆ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಕೂಡಲೆ ರಾಜ್ಯದ ಜನತೆಯ ಕ್ಷಮೆ ಕೋರಿ ಪೂಜ್ಯ ಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಲಗತ್ತಿಸಲು ಆಗ್ರಹಿಸುತ್ತೇವೆ” ಎಂದು ತಿಳಿಸಿದೆ.

ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್‌ ಪಕ್ಷವು ಶೇ.10 ಸ್ಥಾನಗಳನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿಯೇ ಇಲ್ಲದಂತೆ ಜೆಡಿಎಸ್‌ ನಾಯಕರು ಹೊರಗೆ ಬಿದ್ದಿದ್ದಾರೆ. ಇನ್ನು ಕಾಂಗ್ರೆಸ್‌ನ ಸಚಿವರು ತಮಗೆ ಬೇಕಾದ ಕೊಠಡಿಗಳನ್ನು ಆಯ್ಕೆ ಮಾಡಿಕೊಂಡು ಅದನ್ನು ತಮಗೆ ಬೇಕಾದ ರೀತಿಯಲ್ಲಿ ನವೀಕರಣ ಮಾಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಈ ಹಿಂದೆ ಕೊಠಡಿಯಲ್ಲಿ ಇರಿಸಲಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ಫೋಟೋಗಳನ್ನು ಕೂಡ ವಿಧಾನಸೌಧದ ಕೊಠಡಿಗಳಿಂದ ಬೀದಿಗೆ ಎಸೆಯಲಾಗಿದೆ.

Leave a Comment

Your email address will not be published. Required fields are marked *