ಸಮಗ್ರ ನ್ಯೂಸ್: ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಜೂನ್ 6ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6 ವರೆಗೆ ಬೆಂಗಳೂರಿನಲ್ಲಿ ಗುಡುಗು , ಬಿರುಗಾಳಿ ಸಹಿತ ಮಳೆಯಾಗಲಿದೆ.
ಬೆಂಗಳೂರು ಸೇರಿದಂತೆ ಹಲವೆಡೆ ಹಗಲಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ದಕ್ಷಿಣ ಒಳ ಕರ್ನಾಟಕ, ಉತ್ತರಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.
ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದ್ದು, ಜೂನ್ 4 ರಂದು ಇಂದು ಕೇರಳಕ್ಕೆ ಪ್ರವೇಶಿಸಲಿದೆ ಎನ್ನಲಾಗಿದ್ದು, ಈ ಹಿನ್ನೆಲೆ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಇನ್ನೂ ಕೆಲವು ದಿನಗಳ ಮಟ್ಟಿಗೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.