ಸಮಗ್ರ ನ್ಯೂಸ್: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕೊಲೆ ಚಾಕು ಇರಿದು ವ್ಯಕ್ತಿ ಕೊಲೆಮಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್(28) ಮೃತ ಯುವಕ.
ತರೀಕೆರೆ ಶಾಸಕ ಶ್ರೀನಿವಾಸ್ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್ಗೆ ಡ್ರ್ಯಾಗರ್ನಿಂದ ಇರಿದಿದ್ದಾನೆ.
ಇನ್ನು ಈ ವೇಳೆ ಮಂಜು ಹಾಗೂ ಸಂಜು ಎಂಬಿಬ್ಬರ ಕೈ ಹಾಗೂ ಕಾಲಿಗೆ ಚಾಕು ಇರಿತದ ಗಾಯಗಳಾಗಿದೆ. ಇನ್ನು ವರುಣ್ಗೆ ಹೊಟ್ಟೆಗೆ ಚಾಕು ಇರಿದಿದ್ದರಿಂದ ಸಾವನ್ನಪ್ಪಿದ್ದಾನೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.