ಸಮಗ್ರನ್ಯೂಸ್: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂ.6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸದ ವಿವರ:
ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್ಗೆ ತೆರಳುವರು. ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿ ಭೇಟಿ ಮತ್ತು ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ಮತ್ತು ಪರಿಶೀಲನಾ ಸಭೆ ನಡೆಸಿ, ಬಳಿಕ ಮಧ್ಯಾಹ್ನ 1.30ಕ್ಕೆ ನಗರದ ಸಕ್ರ್ಯೂಟ್ ಹೌಸ್ಗೆ ತೆರಳಿ ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ಪ್ರಯಾಣಿಸಲಿದ್ದಾರೆ.
ಜೂ.7ರಂದು ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 5.25ಕ್ಕೆ ಬೆಂಗಳೂರಿನ ಕೇಂದ್ರಸ್ಥಾನ ತಲುಪುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.