ಸಮಗ್ರ ನ್ಯೂಸ್: ವಿದ್ಯುತ್ ಬಿಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಎಂಬಂತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮಸಭೆಯಲ್ಲಿ ನಡೆದಿದೆ. ಶಿಶಿಲ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜೂ.7ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಸಂದೀಪ್ ಎ. ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಭಾಗವಹಿಸಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ಅವರರು ಗ್ರಾಮಸ್ಥರ ಯಾವುದೇ ಕಷ್ಟಕ್ಕೆ ಸ್ಪಂದಿಸಲು ನಾವು ಬದ್ಧರಾಗಿದ್ದೇವೆ. ಮನೆ ತೆರಿಗೆ, ನೀರಿನ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಕಟ್ಟಿ ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರು ಕೈಜೋಡಿಸಬೇಕು. ಶಿಶಿಲ ಗ್ರಾಮವನ್ನು ಒಂದು ಮಾದರಿ ಗ್ರಾಮವನ್ನಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುಧಿನ್, ಯಶೋಧರ ಭಟ್, ಚೆನ್ನಕ್ಕ, ಲಲಿತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಮಾ ಖರ್ಚಿನ ವರದಿಯನ್ನು ಸಿಬ್ಬಂದಿ ಸುಂದರ್ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಶ್ ವಂದಿಸಿದರು.