ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹೊಣೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೆಗಲೇರಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಗುಂಡುರಾವ್, ದಕ್ಷಿಣ ಕನ್ನಡದಲ್ಲಿನ ನೈತಿಕ ಪೊಲೀಸ್‌ಗಿರಿ ಅಂತ್ಯಹಾಡುವುದಾಗಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು . ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ. ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿ ಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡುರಾವ್ ಹೇಳಿದ್ದಾರೆ.
ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡುರಾವ್ ಹೇಳಿದ್ದಾರೆ. ಚಾಮರಾಜನಗರ ಆಕ್ಸಿನ್ ದುರಂತ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ಒಳಪಡುತ್ತದೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯದಿಂದ ತನಿಖೆ ಮಾಡಬೇಕಿದೆ ಎಂದಿದ್ದಾರೆ