ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ , ಶಾಸಕ ಹರೀಶ್ ಪೂಂಜಾ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿ ಇಂದು(ಜೂನ್ 09) ಆದೇಶ ಹೊರಡಿಸಿದೆ.
ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.