ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ ಬಳಿಕ, ವಿದ್ಯುತ್ ದರದಲ್ಲಿ ಏರಿಕೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಸಾರ್ವಜನಿಕರು ಖಂಡಿಸುತ್ತಿದ್ದಾರೆ.
‘ಪ್ರತಿ ತಿಂಗಳು ನಮ್ಮ ಮನೆಗೆ ತಿಂಗಳಿಗೆ 300 ರೂ.ಒಳಗೆ ಕರೆಂಟ್ ಬಿಲ್ ಬರುತ್ತಿತ್ತು. ಈ ತಿಂಗಳು 600 ರೂಪಾಯಿಯಷ್ಟು ಬಿಲ್ ಬಂದಿದೆ’ ಎಂದು ಜನರು ಆರೋಪಿಸುತ್ತಿದ್ದಾರೆ.
ಸರ್ಕಾರ ಒಂದೆಡೆ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿದ್ದು, ಇನ್ನೊಂದೆಡೆ ದರ ಹೆಚ್ಚಿಸುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನರ ಗಮನಕ್ಕೆ ಬಾರದಂತೆ ವಿದ್ಯುತ್ ಬಿಲ್ ಏರಿಕೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.