ಸಮಗ್ರ ನ್ಯೂಸ್: ರಾಜ್ಯ ಸರಕಾರದ ೫ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ನಾಳೆಯಿಂದಲೇ ಶುರುವಾಗಲಿದ್ದು, ಸ್ಟಿಕ್ಕರ್ ಇರುವ ಬಸ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಬೇಡ.ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಆದರೆ 3 ತಿಂಗಳ ಬಳಿಕ ಸ್ಮಾರ್ಟ್ ಕಾರ್ಡ್ ಕಡ್ಡಾಯ. ಮೂರು ತಿಂಗಳ ಒಳಗಾಗಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆದಿರಬೇಕು ಎಂದರು.
ಸ್ಮಾರ್ಟ್ ಕಾರ್ಡ್ ಇದ್ದರೆ ಎಲ್ಲಾ ದಾಖಲೆಗಳು ಗೊತ್ತಾಗುತ್ತವೆ. ಎಷ್ಟು ಮಹಿಳೆಯರು ಓಡಾಡುತ್ತಿದ್ದಾರೆ ಎನ್ನುವುದು ತಿಳಿಯುತ್ತದೆ. ಸ್ಮಾರ್ಟ್ ಕಾರ್ಡ್ ಇಲ್ಲದಿದ್ದರೆ ಉಚಿತ ಪ್ರಯಾಣ ಇಲ್ಲ ಎಂದು ಸ್ಪಷ್ಟಪಡಿಸಿದರು.