Ad Widget .

ವಾಯುಭಾರ ಕುಸಿತ| ಜೂ. 15ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದ ಪರಿಣಾಮ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Ad Widget . Ad Widget . Ad Widget .

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *