ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ(14) ಮೃತ ದುರ್ದೈವಿ.

Ad Widget ... ..

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.
ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ.

Ad Widget

ಬಸ್‌ನಲ್ಲಿ ಶಾಲೆಗೆ ಹೋಗಲು ವಾಸನ ಗ್ರಾಮದಿಂದ ಕುಸನೂರ ಗ್ರಾಮಕ್ಕೆ ತೆರಳುತ್ತಿದ್ದಳು. ಮದುವೆ ಸೀಸನ್ ಹಿನ್ನೆಲೆಯಲ್ಲಿ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ರಶ್ ಇದ್ದಿದ್ದರಿಂದ ವಿದ್ಯಾರ್ಥಿನಿ ಫುಟ್‌ಬೋರ್ಡ್‌ನಲ್ಲಿ ಕ್ರಾಸ್‌ನಲ್ಲಿ ಬಸ್ ತಿರುವು ಪಡೆಯುವ ಸಂದರ್ಭದಲ್ಲಿ ಆಯತಪ್ಪಿ ಕೆಳ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Leave a Comment

Your email address will not be published. Required fields are marked *