ತೆರೆಗೆ ಅಪ್ಪಳಿಸಲು ರೆಡಿಯಾಗಿದೆ ‘ಟೋಬಿ’ | ಮತ್ತೊಂದು ಕಮಾಲ್ ಮಾಡ್ತಾರಾ ರಾಜ್.ಬಿ ಶೆಟ್ಟಿ

ಸಮಗ್ರ ನ್ಯೂಸ್: ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ.

Ad Widget ... ..

ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮತ್ತೊಂದು ಖುಷಿ ಸಂಗತಿ ಅಂದರೆ, ಈ ಚಿತ್ರಕ್ಕೆ ಕಥೆ ಬರೆದದ್ದು ಖ್ಯಾತ ಕಥೆಗಾರ ಟಿ.ಕೆ ದಯಾನಂದ್.

Ad Widget

ಸಂಭಾಷಣೆಗಾರರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿರುವ ಟಿ.ಕೆ ದಯಾನಂದ್, ಬೆಲ್ ಬಾಟಮ್, ಅಶೋಕ ಬ್ಲೇಡ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಟೋಬಿಗೂ ಕೂಡ ಇವರದ್ದೇ ಕಥೆಯಿದೆ.

ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Leave a Comment

Your email address will not be published. Required fields are marked *