Ad Widget .

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ 9ದಿನಗಳ ವಿಶಿಷ್ಟ ಹವನ

ಸಮಗ್ರ ನ್ಯೂಸ್:‌ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.

Ad Widget . Ad Widget .

ಜೂ.11ರಂದು ಪ್ರಾರಂಭವಾಗಿ ಜೂ.18ರವರೆಗೆ 9 ದಿನಗಳ ಕಾಲ ನಡೆಯುವ ಈ ಹೋಮದ ನೇತ್ರತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ ಎನ್ನಲಾಗಿದೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಒಳಗೆ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯಕ್ರಮದ ವಿವರ ಹೊರ ಹೋಗಬಾರದೆಂಬ ಉದ್ದೇಶದಿಂದ ಜಮೀನಿನ ದ್ವಾರಗಳನ್ನು ಸಂಪೂರ್ಣವಾಗಿ ಮುಚ್ಚಿ ರಹಸ್ಯವನ್ನು ಕಾಪಾಡಲಾಗಿದೆ. ಇದು ಸ್ಥಳೀಯರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ನಡೆಯುವಾಗ ಅಕ್ಕ ಪಕ್ಕದ ಮನೆಯವರಿಗೆ ಹಾಗೂ ನೆಂಟರಿಷ್ಟರಿಗೆ ಹೇಳಿ ಮಾಡುವುದು ವಾಡಿಕೆಯಾಗಿರುವಾಗ ಬಚ್ಚಿಟ್ಟು ಮಾಡುತ್ತಿರುವುದು ಯಾಕೇ ಎನ್ನುವುದು ಸ್ಥಳೀಯರ ಕೌತುಕಕ್ಕೆ ಕಾರಣವಾಗಿರುವ ಪ್ರಮುಖಾಂಶ.

Ad Widget . Ad Widget .

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿನಾಯ ಸೋಲು ಕಂಡಿದ್ದು,ಪಕ್ಷದ ಪ್ರಮುಖ ನಾಯಕರುಗಳ ತಪ್ಪುಗಳು, ಎಡವಟ್ಟು ನಿರ್ಣಯಗಳು, ಅಹಂಕಾರ ಪ್ರವೃತ್ತಿ ಸೋಲಿಗೆ ಕಾರಣವೆಂಬ ಆಕ್ರೋಶ ಪಕ್ಷದ ಕಾರ್ಯಕರ್ತರಲ್ಲಿದೆ. ಪಕ್ಷದ ನಾಯಕತ್ವದಲ್ಲಿ ಅಮೊಲಾಗ್ರ ಪರಿವರ್ತನೆ ಮಾಡುವ ಮೂಲಕ ಪಕ್ಷನ್ನು ಲೋಕ ಸಭೆ ಚುನಾವಣೆಗೆ ಸಿದ್ದಗೊಳಿಸಬೇಕು ಎಂಬ ಅಗ್ರಹವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಈ ಕುರಿತ ಅಭಿಯಾನ ಸಾಮಾಜಿಕ ಜಾಲತಾಣದಲ್ಲೂ ನಡೆಯುತ್ತಿದೆ.

ಈ ಎಲ್ಲ ಒಟ್ಟಾರೆ ಬೆಳವಣಿಗೆಯಿಂದ ರಾಜ್ಯಾಧ್ಯಕ್ಷ ಪದವಿ ಕಳೆದುಕೊಳ್ಳುವ ಆತಂಕವು ಎದರಾಗಿದೆ . ಜತೆಗೆ ಮುಂದಿನ ಮಂಗಳೂರು ಲೋಕಸಭಾ ಸ್ಥಾನದಲ್ಲಿ ಪುತ್ತೂರಿನಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳುವಲ್ಲಿ ಸಫಲರಾದ ಪ್ರಭಾವಿ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲರವರನ್ನು ಸ್ಪರ್ಧಿಸಲು ಟಿಕೆಟ್‌ ನೀಡಬೇಕೆಂಬ ಕೂಗು ಬಲವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಧ್ವನಿಸುತ್ತಿದೆ. ಇದಕ್ಕೆ ಪೂರಕ ವಾತವರಣ ನಿರ್ಮಿಸುವ ಕಾರ್ಯವನ್ನು ಪುತ್ತಿಲ ಬಳಗ ನಿರಂತರವಾಗಿ ಕ್ಷೇತ್ರದಾದ್ಯಂತ ಮಾಡುತ್ತಿದೆ.

ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಮುಂದಿನ ಲೋಕಸಭಾಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿ ಹೋಗುವ ಸಾಧ್ಯತೆಗಳು ಅಧಿಕವಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಮೂಲೆ ಗುಂಪಾಗುವ ಆತಂಕ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರ ಸಿಗಬೇಕು ಮತ್ತು ಉನ್ನತ ಸ್ಥಾನ ಮಾನ ಸಿಗಬೇಕೆಂಬ ನಿಟ್ಟಿನಲ್ಲಿ ಈ ಹವನ ಕೈಗೊಂಡಿರುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Leave a Comment

Your email address will not be published. Required fields are marked *