ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆದು, ಈ ಹಿಂದೆ ಇದ್ದ ಹಳೇ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು.3 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಪಿಎಂಸಿ ಕಾಯ್ದೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು.
ಈಗಿನ ಕಾಯ್ದೆ ರದ್ದು ಮಾಡಿ, ಈ ಹಿಂದಿನ ಎಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ಆತುರಾತುರದಲ್ಲಿ ಜಾರಿಗೆ ತಂದ ಪರಿಣಾಮವಾಗಿ ಎಪಿಎಂಸಿ ಅಮಾಲಿಗಳಿಗೂ ಸಂಕಷ್ಟ ಎದುರಾಗಿತ್ತು. ಕೇಂದ್ರದ ಎಪಿಎಂಸಿ ಕಾಯ್ದೆಗೆ ದೇಶದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ವಾಪಸ್ ಪಡೆದರೂ ರಾಜ್ಯದಲ್ಲಿ ಮಾತ್ರ ಬಿಜೆಪಿ ಸರ್ಕಾರ ಕಾಯ್ದೆ ವಾಪಸ್ ಪಡೆಯಲು ಮುಂದಾಗಿರಲಿಲ್ಲ ಎಂದು ಹೇಳಿದ್ದಾರೆ.