ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಶುಕ್ರವಾರದ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ ಎಂದು ತಿಳಿಸಿದೆ.
ಜೂನ್.16ರ ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇದೆ. ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ತಾಮಮಾನದಲ್ಲಿ ಹೇಳಿಕೊಳ್ಳುವಂತ ಹೆಚ್ಚಿನ ಬದಲಾವಣೆಗಳು ಆಗಿಲ್ಲ. ರಾಜ್ಯದಲ್ಲೇ ಅತಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.