ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

. Ad Widget . Ad Widget . Ad Widget .

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *