ರಾಜ್ಯದ ಜನತೆಗೆ ಗುಡ್ ನ್ಯೂಸ್| ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ, 2 ಕೆಜಿ ಧಾನ್ಯ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

Ad Widget ... ..

8 ಕೆಜಿ ಅಕ್ಕಿ ಜತೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಎರಡು ಕೆಜಿ ಜೋಳ ವಿತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಡಚಣೆ ಎದುರಾದರೂ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಹೇಳಿದ್ದು, ಜುಲೈ 1ರಿಂದಲೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *