`ಗ್ಯಾರಂಟಿ’ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರವಾಗಿರಿ, ಗ್ಯಾರಂಟಿಗೆ ಅರ್ಜಿ ಸಲ್ಲಿಸುವವರ ಮಾಹಿತಿ ಕದಿಯಲು ಸೈಬರ್ ಕದೀಮರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.

Ad Widget ... ..

ಕರ್ನಾಟಕ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ.

Ad Widget

ಹೌದು, ಸೈಬರ್ ಕಳ್ಳರು ಸೋಶಿಯಲ್ ಮೀಡಿಯದಲ್ಲಿ ನಕಲಿ ಲಿಂಕ್ ಗಳನ್ನು ಹರಿಬಿಡುತ್ತಿದ್ದಾರೆ. ಅಪ್ಪಿ ತಪ್ಪಿ ಈ ಲಿಂಕ್ ದ್ರೆ ಬ್ಯಾಂಕ್‌ನಲ್ಲಿರುವ ನಿಮ್ಮ ಹಣ ಸೈಬರ್ ಕಳ್ಳರ ಪಾಲಾಗಲಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ

Leave a Comment

Your email address will not be published. Required fields are marked *