ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ!

ಸಮಗ್ರ ನ್ಯೂಸ್: ಮದ್ಯ ಪ್ರಿಯರಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಯಾವುದೇ ರೀತಿಯಲ್ಲೂ ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Ad Widget ... ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮದ್ಯದ ದರ ಹೆಚ್ಚಳಮಾಡಿಲ್ಲ. ಹೆಚ್ಚಳದ ಯಾವುದೇ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ. ಹೆಚ್ಚಳಮಾಡಿದ್ರೆ ನಾವೇ ಮಾಹಿತಿ ನೀಡುತ್ತೇವೆ. ಬಾರ್ ಗಳಲ್ಲಿ ಮದ್ಯದ ಬೆಲೆ ಹೆಚ್ಚಿಸಿರುವುದಾಗಿ ಕೆಲವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಇದುವರೆಗೂ ನನಗೆ ತಿಳಿದಿರುವಂತೆ ಅಬಕಾರಿ ಇಲಾಖೆಯಿಂದ ಮದ್ಯದ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಪರಿಶೀಲಿಸಿ ತಿಳಿಸುತ್ತೇವೆ ಎಂದ ಅವರು, ಕಳೆದ ಒಂದು ವಾರದಿಂದ ಬಿಯರ್ ದರ 20 ರೂಪಾಯಿ ಹೆಚ್ಚಳವಾಗಿದೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *