ಸಮಗ್ರ ನ್ಯೂಸ್: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು , ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಕೌನ್ಸೆಲಿಂಗ್ ಗೆ ಮಂಗಳವಾರದಿಂದ ಚಾಲನೆ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೇಳು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಲಾಗಿದ್ದು, ತಕ್ಷಣದಿಂದಲೇ ಕೌನ್ಸೆಲಿಂಗ್ ಪ್ರಾರಂಭಗೊಳ್ಳಲಿದೆ. ಪುನಾರಂಭದ ಬಗ್ಗೆ ಬಹಳ ಒತ್ತಡ ಇದ್ದ ಕಾರಣದಿಂದ ತಕ್ಷಣವೇ ಕೌನ್ಸೆಲಿಂಗ್ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗವಣೆ ಕೌನ್ಸೆಲಿಂಗ್ ಇಂದಿನಿಂದ ಆರಂಭವಾಗಲಿದ್ದು, ಆಯಾ ಜಿಲ್ಲೆಗಳ ಉಪನಿರ್ದೇಶಕರ ಕಾರ್ಯಾಲಯದಲ್ಲಿ ಬೆಳಗ್ಗೆ ತಾಲೂಕು ಮಟ್ಟದ ಪ್ರಾಥಮಿ, ಮಧ್ಯಾಹ್ನ ಪ್ರೌಢ ಶಾಲಾ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹೊಂದಾಣಿಕೆ ಕೌನ್ಸಿಲಿಂಗ್ ಬ್ಲಾಕ್ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರವರೆದ ದಿನಾಂಕ 20-06-2023ರಂದು ಪೂರ್ವಾಹ್ನ ಕೌನ್ಸಿಲಿಂಗ್ ನಡೆಸಲಾಗುತ್ತದೆ. ಬ್ಲಾಕ್ ಹಂತದ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹೊಂದಾಣಿಕೆಯ ನಂತರ ತಾಲೂಕಿನಲ್ಲಿ ಖಾಲಿ ಹುದ್ದೆ ಲಭ್ಯವಿಲ್ಲದೆ ಉಳಿಕೆಯಾಗುವ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಜಿಲ್ಲಾ ಹಂತದಲ್ಲಿ 21-06-2023ರಂದು ಪೂರ್ವಾಹ್ನ ನಡೆಸಲಾಗುತ್ತದೆ.