ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ

ಸಮಗ್ರ ನ್ಯೂಸ್: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

Ad Widget ... ..

ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಮೂರು ಮಂದಿಗೆ ತೀವ್ರ ಗಾಯಗಳಾಗಿದ್ದು,ಗಾಯಾಳುಗಳನ್ನು ಸಂಪಾಜೆ ಪ್ರಾ.ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೊರಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *