ಸಮಗ್ರ ನ್ಯೂಸ್: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ.
ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ ನೋಂದಣಿಗೆ ಹೊಸ ಲಿಂಕ್ ಕೂಡ ನೀಡಲಾಗಿದೆ.
ಸೇವಾ ಸಿಂಧು ಪೋರ್ಟಲ್ ಸರ್ವಸ್ ಸಮಸ್ಯೆ ಸುಧಾರಿಸಿದೆ. ರಾಜ್ಯದ ಜನರು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇದ್ದಂತ ತಾಂತ್ರಿಕ ಸಮಸ್ಯೆಯನ್ನು ಕ್ಲಿಯರ್ ಮಾಡಲಾಗಿದೆ. ಸರ್ವರ್ ಸಾಮರ್ಥ್ಯವನ್ನು ಹೆಚ್ಚುಗೊಳಿಸಲಾಗಿದ್ದು, ಮೊಬೈಲ್ ಸೇರಿದಂತೆ ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಕ್ಷಣ ಮಾತ್ರದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಹಕರು https://sevasindhugs.karnataka.gov.in/about_kannada.html# ಲಿಂಕ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.