ಇಂಗ್ಲೆಂಡ್: ಇಲ್ಲಿನ ಸೌತಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ನಡೆಯದೇ ಎರಡನೇ ದಿನ ಆರಂಭವಾಗಿದೆ. ಭಾರತ 146 ರನ್ ಗೆ 3 ವಿಕೆಟ್ ಕಳೆದುಕೊಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಜೇಯ 44 ರನ್ ಮತ್ತು ಅಜಿಂಕ್ಯಾ ರೆಹಾನೆ ಅಜೇಯ 29 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಮಾಜಿ ನಾಯಕ ಎಂ.ಎಸ್. ಧೋನಿ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಧೋನಿ 60 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, ವಿರಾಟ್ ಕೊಹ್ಲಿ 61 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸುವ ಮೂಲಕ ದಾಖಲೆ ಬರೆದಿದ್ದಾರೆ.
ವಿಶ್ವಕ್ರಿಕೆಟ್ ನಲ್ಲಿ ಅತಿ ಹೆಚ್ಚು ಬಾರಿ ನಾಯಕನಾದ ಆರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ