ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ.
ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ ಯಾತ್ರಾರ್ಥಿಗಳನ್ನು ಬಿಡಬಾರದೆಂದು ಜಿಲ್ಲಾಧಿಕಾರಿ ತಿಳಿಸಿದ್ದರು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ ಯಾತ್ರಾರ್ಥಿಗಳನ್ನು ಬಿಡಬಾರದೆಂದು ಜಿಲ್ಲಾಧಿಕಾರಿ ತಿಳಿಸಿದ್ದರು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.