ಕರಾವಳಿ ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆ ನಿರೀಕ್ಷೆ| ರಾಜ್ಯದಲ್ಲಿ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Ad Widget ... ..

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Ad Widget

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *