Ad Widget .

ಮಂಗಳೂರು: ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಬಾಲಕರಿಬ್ಬರು ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ.

Ad Widget . Ad Widget .

ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget . Ad Widget .

Leave a Comment

Your email address will not be published. Required fields are marked *