ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Ad Widget ... ..

ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

Ad Widget

ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಫಲಿತಾಂಶ ವೀಕ್ಷಿಸಲು ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ನಮೂದಿಸಬೇಕಿದೆ. ಆ ಬಳಿಕ ನಿಮ್ಮ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಿದ ಬಳಿಕ ಡೌನ್ ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳುವುದು ಮರೆಯಬೇಡಿ.

Leave a Comment

Your email address will not be published. Required fields are marked *