ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು ರೂ ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆಗೆ ನಿಗದಿಯಾದ 20 ರೂ ಹಣವನ್ನು ಸರ್ಕಾರ ಭರಿಸಲಿದೆ ಎಂದರು.
ಈಗಾಗಲೆ ನನ್ನ ಇಲಾಖೆಯ ಎಲ್ಲಾ ಸಿಬ್ಬಂದಿಗೂ ಸೂಚನೆ ನೀಡಿದ್ದೇನೆ. ಸೇವಾಸಿಂಧು, ಗ್ರಾಮ ಒನ್, ನಾಡಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್ ನಲ್ಲಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದರು.