Ad Widget .

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಪರೀಕ್ಷೆಗಳು ಆಗಸ್ಟ್‌ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಹಿಂದೆ 2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್‌ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು.

Ad Widget . Ad Widget . Ad Widget .

ಆದರೆ ಪದವಿ ವಿದ್ಯಾರ್ಥಿಗಳಿಗೆ ಜುಲೈ/ಆಗಸ್ಟ್ ನಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ ಕಾರಣಕ್ಕೆ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್‌ ಅವಧಿಯನ್ನು ವಿಸ್ತರಣೆ ಮಾಡುವಂತೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಸಾರಿಗೆ ಇಲಾಖೆ ಎಲ್ಲ ನಾಲ್ಕು ನಿಗಮಗಳಿಗೆ ಮನವಿ ಸಲ್ಲಿಸಿದ್ದರು.

ಆ ಮನವಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲತೆಗಾಗಿ ವಿಸ್ತರಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಬಸ್ ಸಿಬ್ಬಂದಿಗೆ ಸಾರಿಗೆ ಸಂಸ್ಥೆ ಸೂಚಿಸಿರುವ ಈ ಕೆಳಗಿನ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.

ಮಾರ್ಗಸೂಚಿಗಳೇನು?

  • ಯಾವ ಕೋರ್ಸ್ಳಿಗೆ ಮತ್ತು ಯಾವ ತರಗತಿಗಳು ಎಲ್ಲಿಯವರೆಗೆ ನಡೆಯುತ್ತವೆ ಎಂಬುದರ ಬಗ್ಗೆ ಸಂಬಂಧಿಸಿದ ಕಾಲೇಜುಗಳಿಂದ ದೃಢೀಕರಣ ಪತ್ರ ಪಡೆಯಬೇಕು.
  • ಸದರಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
  • ಪಾಸ್‌ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು/ಎರಡು ತಿಂಗಳ ಶುಲ್ಕವನ್ನು ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಖಡ್ಡಾಯವಾಗಿ ನಮೂದಿಸುವುದು.
  • 2022-23 ಸಾಲಿನ ಬಸ್‌ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *