‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

Ad Widget ... ..

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಮೊದಲಾದವರು ಬಂಡವಾಳ ಹೂಡಿದ್ದಾರೆ.

Ad Widget

ಪ್ರತಿ ಬಾರಿ ಯುನಿಕ್ ಕಾನ್ಸೆಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸಲಿದ್ದಾರೆ. ಅಜನೀಶ್ ಲೋಕನಾಥ್ ರ ಸಂಗೀತ, ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರವಿದಾಗಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲಿದೆ.

Leave a Comment

Your email address will not be published. Required fields are marked *