ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಮಾಸ್ತಿಕಟ್ಟೆಯಲ್ಲಿ ಸಂಭವಿಸಿದೆ.

Ad Widget ... ..

ಪಿಕಪ್ ವಾಹನದಲ್ಲಿದ್ದ ರಾಜು ಗೌಡ (46) ಮೃತ ವ್ಯಕ್ತಿ, ಗಂಭೀರವಾಗಿ ಗಾಯಗೊಂಡ ಪಿಕಪ್ ಚಾಲಕ ಶಿವರಾಜ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಮಾಸ್ತಿಕಟ್ಟೆಯಲ್ಲಿ ಟಿಪ್ಪರ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಲ್ಲೂರು ಠಾಣಾ ಪೋಲಿಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *