ಸಮಗ್ರ ವಾರ್ತೆ: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಸಭೆಯೊಂದರ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಹೊಂದಿದ್ದಾರೆ. ಅವರ ನಿಧನ ಆಘಾತಕಾರಿಯಾದದ್ದು ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದ್ದ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಂಡಿದ್ದ ಯಾದವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.