ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ವೇಳೆ ಆಯತಪ್ಪಿ ಬಿದ್ದು ನೀರಲ್ಲಿ‌ ಕೊಚ್ಚಿ ಹೋದ ವ್ಯಕ್ತಿ!!

ಸಮಗ್ರ ನ್ಯೂಸ್: ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ವರದಿಯಾಗಿದೆ.

Ad Widget ... ..

ನೀರು ಪಾಲಾಗಿರುವ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗಿದ್ದು ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.

Ad Widget

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಕಾಣೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *