Ad Widget .

ಮಡಿಕೇರಿ:ಸಂಚಾರ ನಿಯಮ ಉಲ್ಲಂಘನೆ ಶೇ.50 ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ

ಸಮಗ್ರ ನ್ಯೂಸ್: ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಮಾನ್ಯ ಗೌರವಾನ್ವಿತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 09 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *