ಸಮಗ್ರ ನ್ಯೂಸ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.







