ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಉಪಹಾರ ಸವಿದ ಡಿಕೆಶಿ

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ವಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ.

Ad Widget ... ..

ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರ ಜೊತೆಗೆ ಕೂತು ಉಪಹಾರ ಸೇವಿಸಿದ್ದಾರೆ.

Ad Widget

ಡಿ.ಕೆ.ಶಿವಕುಮಾರ್ ಅವರು ಮೊದಲು ಬೆಳಗ್ಗೆ ಬೆಂಗಳೂರಿನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರು. ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು, ಅಲ್ಲಿ ಸಾರ್ವಜನಿಕರ ಜೊತೆಗೆ ಕೂತು ಕೇಸರಿಬಾತ್, ಉಪ್ಪಿಟ್ಟು ಸೇವನೆ ಮಾಡಿದ್ದಾರೆ.

Leave a Comment

Your email address will not be published. Required fields are marked *