ಸಮಗ್ರ ನ್ಯೂಸ್: ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತಿತ್ತು. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತಿತ್ತು.
ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಸಂಖ್ಯೆ 07353/07354 ಜುಲೈ 16 ರಿಂದ ಶಾಶ್ವತವಾಗಿ ರದ್ದುಗೊಂಡಿದೆ ಎಂದು ಸೌತ್ ವೆಸ್ಟರ್ನ್ ರೈಲ್ವೆ ಮಾಹಿತಿ ನೀಡಿದೆ. ಈ ವರ್ಷ ಮಾರ್ಚ್ 23 ರಂದು ಈ ದೈನಂದಿನ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಪ್ರಾರಂಭಿಸಲಾಗಿತ್ತು. ಸೀಮಿತ ನಿಲುಗಡೆಗಳನ್ನಷ್ಟೇ ಹೊಂದಿದ್ದ ಈ ವಿಶೇಷ ಎಕ್ಸ್ಪ್ರೆಸ್ ರೈಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಮಾತ್ರ ನಿಲ್ಲುತಿತ್ತು.
ಈ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತಿತ್ತು. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತಿತ್ತು. ಈ ವಿಶೇಷ ರೈಲು ಮೂರು ಎಸಿ ತರಗತಿಗಳು ಮತ್ತು ಏಳು ಸ್ಲೀಪರ್ ತರಗತಿಗಳು ಸೇರಿದಂತೆ 16 ಕೋಚ್ಗಳನ್ನು ಒಳಗೊಂಡಿತ್ತು.
ಸೌತ್ ವೆಸ್ಟರ್ನ್ ರೈಲ್ವೆ ಅಧಿಕಾರಿಗಳ ಪ್ರಕಾರ ಶೇಕಡಾ 34 ಕ್ಕಿಂತ ಕಡಿಮೆ ಸೀಟುಗಳಷ್ಟೇ ಈ ವಿಶೇಷ ರೈಲಿನಲ್ಲಿ ತುಂಬಿರುತ್ತಿತ್ತು. ಈ ಕಾರಣದಿಂದಾಗಿ ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ.