ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ನಗರದ ಮಾರತಹಳ್ಳಿಯಲ್ಲಿ ಜೋಡಿ ಕೊಲೆ ನಡೆದ ಬೆನ್ನಲ್ಲೇ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್ ಎಂದು ಗುರುತಿಸಲಾಗಿದೆ. ನಾಲ್ಕೈದು ದುಷ್ಟರ್ಮಿಗಳು ಬೈಕ್ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ ಕಪಿಲ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕೂಡಲೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಕಪಿಲ್ ಉಸಿರು ಚೆಲ್ಲಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಆಸ್ಪತ್ರೆಗೂ ಡಿಸಿಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. 2014ರಲ್ಲಿ ನಕ್ರ ಬಾಬುವಿನ ಕೊಲೆ ಪ್ರಕರಣದಲ್ಲಿ ರಿಯಲ್ ಎಸ್ಟೆಸ್ ಉಸ್ಯಮಿಯಾಗಿದ್ದ ಮರತ ರೌಡಿಶೀಟರ್ ಕಪಿಲ್ ಆರೋಪಿಯಾಗಿದ್ದನು.