ಗೃಹಜ್ಯೋತಿ ಅರ್ಜಿ ಸಲ್ಲಿಸಲು ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆ. ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.

Ad Widget ... ..

ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾತನಾಡಿದರು.

Ad Widget

ಸಚಿವರು ಮಾತನಾಡಿ, “ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ” ಎಂದು ಹೇಳಿದರು.

ಸರ್ಕಾರ ನೀಡಿದ ಗಡುವಿನೊಳಗೆ ಅರ್ಜಿ ಸಲ್ಲಿಕೆ ಮಾಡದಿದ್ದರೆ ಜನರು ಯಾವುದೇ ಆತಂಕ ಪಡಬೇಕಿಲ್ಲ. ಸಚಿವರು, “ಯೋಜನೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಯೋಜನೆಯೊಳಕ್ಕೆ ತರಲು ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕದ ನಂತರ ಎರಡು ತಿಂಗಳವರೆಗೆ ವಿದ್ಯುತ್ ಅದಾಲತ್ ನಡೆಸಲಾಗುವುದು” ತಿಳಿಸಿದ್ದಾರೆ.

Leave a Comment

Your email address will not be published. Required fields are marked *