ಭಾರೀ ಮಳೆ ಸಾಧ್ಯತೆ| ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಎಲ್ಲೋ‌‌‌ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

Ad Widget ... ..

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

Ad Widget

ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ಇಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

Leave a Comment

Your email address will not be published. Required fields are marked *