Ad Widget .

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು

ಸಮಗ್ರ ನ್ಯೂಸ್: ಜು.13 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾದ ಕವಿತಾ ಕೆ.ಸಿ ಹಾಗೂ ಪ್ರಥಮ ದರ್ಜೆ ಸಹಾಯಕಿಯಾಗಿ ಉಡುಪಿ ಜಿಲ್ಲೆಗೆ ವರ್ಗಾವಣೆಯಾದ ಅನಿತಾ ಟಿ.ಎಸ್ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಕವಿತಾ ಅವರು ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಿಂದ ವರ್ಗಾವಣೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ಶ್ರೀಮತಿ ಅನಿತಾ ಅವರು 2016ನೇ ಇಸವಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ 7 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರುಗಳು ಉತ್ತಮ ಕೆಲಸಗಾರರಾಗಿದ್ದು ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದು, ನಗುಮುಖದಿಂದ ಎಲ್ಲಾ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದರು.ನಿಷ್ಕಾಮ ಸೇವೆಯನ್ನು ಮಾಡಿ ಗೃಹರಕ್ಷಕರ ಮನ ಗೆದ್ದರು. ಇವರಿಗೆ ಮುಂದಿನ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದರು ಹಾಗೂ ಶಾಲು ಹೊದಿಸಿ, ಫಲಪುಷ್ಪ ನೀಡಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

Ad Widget . Ad Widget . Ad Widget .

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ರಮೇಶ್ ಹಾಗೂ ಮೂಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಲೋಕೇಶ್ ಇವರು ಅನಿಸಿಕೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಬಂಟ್ವಾಳ ಘಟಕ ಘಟಕಾಧಿಕಾರಿ ಐತಪ್ಪ, ಮಂಗಳೂರು ಘಟಕದ ಗೃಹರಕ್ಷಕರಾದ ಸುನೀಲ್ ಕುಮಾರ್, ಜ್ಞಾನೇಶ್, ಸಂದೇಶ್, ಕೇಶವ ಶೆಟ್ಟಿಗಾರ್, ಧನಂಜಯ್, ಸಂತೋಷ್, ಪ್ರಸಾದ್, ನಿಖಿಲ್, ಸುಲೋಚನಾ, ಜಯಲಕ್ಷ್ಮೀ, ಮುಂತಾದವರು ಉಪಸ್ಥಿತರಿದ್ದರು.

ಇನ್ನೂ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಉಡುಪಿ ಜಿಲ್ಲಾ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲ ಅವರು ವರ್ಗಾವಣೆಯಾಗಿದ್ದಾರೆ.

Leave a Comment

Your email address will not be published. Required fields are marked *