ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಸಧ್ಯ ಈ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಿದೆ.
ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ವೇಳೆ ಉಂಟಾಗುವ ಒತ್ತಡ ತಪ್ಪಿಸಲು ಹಾಗೂ ಅರ್ಜಿದಾರರಿಗೆ ಅನುಕೂಲದ ದೃಷ್ಠಿಯಿಂದ, ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ‘ಪ್ರಜಾ ಪ್ರತಿನಿಧಿ’ಯನ್ನು ಸರ್ಕಾರ ನೇಮಿಸಿದೆ.
ಈ ಪ್ರಜಾ ಪ್ರತಿನಿಧಿಗಳು, ಯೋಜನೆಗೆ ಅರ್ಜಿ ಸಲ್ಲಿಸಲು ತಂತ್ರಜ್ಞಾನ ಅಡೆತಡೆ ಎದುರಿಸುತ್ತಿರುವವರಿಗೆ ಸಹಾಯ ಮಾಡುತ್ತಾರೆ ಎಂದು ಸರ್ಕಾರ ಹೇಳಿದೆ. ಇನ್ನು ಪ್ರಜಾ ಪ್ರತಿನಿಧಿಗಳು ಫಲನುಭವಿಗಳ ಮನೆಗೆ ಭೇಟಿ ನೀಡಿ, ನಾಗರಿಕರ ಪರವಾಗಿ ಅರ್ಜಿ ಸಲ್ಲಿಸುತ್ತಾರೆ. ಇನ್ನು ಇದಕ್ಕಾಗಿ ಅವ್ರಿಗೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಸ್ಪಷ್ಟ ಪಡೆಸಿದೆ.