ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮದ್ಯಾಹ್ನ 2 ರವರೆಗೆ ಓಪನ್: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Ad Widget ... ..

ಜಿಲ್ಲೆಯ ಅಂಗಡಿ ಮಾಲಕರು ವ್ಯವಹಾರ ಇಲ್ಲದೆ ಭಾರಿ ನಷ್ಟ ಅನುಭವಿಸುತ್ತಿದ್ದು, ಅಂಗಡಿ ತೆರೆಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾಳೆಯಿಂದ ಜಿಲ್ಲೆಯ ಎಲ್ಲ ಅಂಗಡಿಗಳು ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ತೆರೆದಿರಲಿದೆ.

Ad Widget

ಸಾರ್ವಜನಿಕರು ಎಲ್ಲಾ ಅಂಗಡಿಗಳ ತೆರವಾದ ಬಳಿಕ ಬೇಕಾಬಿಟ್ಟಿ ಓಡಾಡಿದೆ ಜಾಗ್ರತೆ ವಹಿಸುವಂತೆ ಉಸ್ತುವಾರಿ ಸಚಿವರು ಜಿಲ್ಲೆಯ ಜನರೊಂದಿಗೆ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *