ಬೆಂಗಳೂರು ವಿ.ವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯ ನಿವಾಸಿ ಪ್ರಸಕ್ತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ.

Ad Widget ... ..

ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಪ್ರಾರಂಭದಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಪದವಿ ಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಹಣಾಧಿಕಾರಿಯಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆರ್ಥಿಕ ಸಲಹೆಗಾರರಾಗಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರದಾನ ವ್ಯವಸ್ಥಾಪಕರಾಗಿ (ಆರ್ಥಿಕ) ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Ad Widget

1995-96ರಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಬಿ.ಕಾಂ ನಲ್ಲಿ ಎರಡನೇ ರ್ಯಾಂಕ್ ಪಡೆದಿರುವ ಶೇಕ್ ಲತೀಫ್ ಬಿ.ಕಾಂ. (ಕಾನೂನು ಮತ್ತು ಬ್ಯಾಂಕಿಂಗ್ ಅಭ್ಯಾಸ) ದಲ್ಲಿ ಅತ್ಯಧಿಕ ಅಂಕ ಪಡೆದು ಎ.ಬಿ.ಶೆಟ್ಟಿ ಸ್ಮಾರಕ ಚಿನ್ನದ ಪದಕ ಗಳಿಸಿದ್ದರು. 97-98ರಲ್ಲಿ ಎಂ.ಬಿ.ಎ. ಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ಚಿನ್ನದ ಪದಕದ ಗೌರವಕ್ಕೆ ಭಾಜನರಾಗಿದ್ದರು. ವೈಶ್ಯ ಬ್ಯಾಂಕ್ ಕೂಡಾ ಈ ಸಂದರ್ಭ ಚಿನ್ನದ ಪದಕ ನೀಡಿ ಗೌರವಿಸಿತ್ತು.

1995ರಲ್ಲಿ 800 ಮೀಟರ್ ಓಟದಲ್ಲಿ ಕೂಡಾ ಮಂಗಳೂರು ವಿ.ವಿ. ಗೆ ಪ್ರಥಮರಾಗಿ ಚಿನ್ನದ ಪದಕ ಪಡೆದಿದ್ದ ಶೇಕ್ ಲತೀಫ್ ರಾಷ್ಟ್ರಮಟ್ಟದ ಗುಡ್ಡಗಾಡು ಓಟದಲ್ಲಿ ಎರಡು ಬಾರಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದು, ಒಂದು ಬಾರಿ ವಿ.ವಿ. ತಂಡದ ನಾಯಕರಾಗಿದ್ದರು.

Leave a Comment

Your email address will not be published. Required fields are marked *