ಸಮಗ್ರ ನ್ಯೂಸ್: ಟೀ ಮಾರುತ್ತಿದ್ದ ವ್ಯಕ್ತಿ ಇಂದು ದೇಶದ ಉನ್ನತ ಹುದ್ದೆಯಾದ ಪ್ರಧಾನಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಅದೃಷ್ಟ ಯಾರಿಗೆ ಇರುತ್ತದೆ ಎಂದು ಹೇಳುವುದು ಅಸಾಧ್ಯ. ಅಂತಹ ಒಂದು ಪ್ರಸಂಗ ತುಮಕೂರು ಜಿಲ್ಲೆಯಲ್ಲಿ ನಿನ್ನೆ ಗುರುವಾರ ಜರುಗಿದೆ. ಟೀ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ದೇವರಾಯನದುರ್ಗ ಪ್ರದೇಶದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟೀ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದ ಮಹಿಳೆಯೊಬ್ಬರು ಉರ್ಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ದೇವರಾಯನದುರ್ಗದಿಂದ ಉರ್ಡಿಗೆರೆ ಗ್ರಾ ಪಂಗೆ ಸದಸ್ಯರಾಗಿ ಚುನಾಯಿತರಾಗಿದ್ದ ಕೆ.ಎಸ್. ಅನ್ನಪೂರ್ಣಮ್ಮ ಅವರಿಗೆ ನಿನ್ನೆ ನಡೆದ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಒಲಿದುಬಂದಿದೆ.
ಗ್ರಾಪಂ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅನ್ನಪೂರ್ಣಮ್ಮ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಗ್ರಾಮ ಪಂಚಾಯಿತಿ ಸದಸ್ಯರು ಆಯ್ಕೆಗೊಳಿಸಿದರು. ಗ್ರಾಮದ ಜನರು ಅನ್ನಪೂರ್ಣಮ್ಮ ಗ್ರಾಪಂ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿದ್ದಂತೆ, ಜನರಿಂದ ಪ್ರಶಂಸೆಗಳ ಮಹಾಪೂರ ಹರಿದು ಬರುತ್ತಿದೆ.