ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಸ್ನಾನಘಟ್ಟ ಶನಿವಾರ ಮುಳುಗಡೆಗೊಂಡಿದೆ.

Ad Widget ... ..

ಶುಕ್ರವಾರ ರಾತ್ರಿಯಿಂದಲೇ ಬಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಲ್ಲೂ ಬಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಕುಮಾರಧಾರ ಸ್ನಾನ ಘಟ್ಟ ಹಾಗೂ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ.

Ad Widget

ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಭಕ್ತಾಧಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ನದಿ ದಡದಲ್ಲಿ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಎಚ್ಚರಿಕಾ ಸಂದೇಶ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *