ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬಾಟೋಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ಈ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಿರುಕು ಬಿಟ್ಟ ಗುಡ್ಡ, ಅವಘಡಕ್ಕೆ ಕಾರಣವಾಗಿರುವ ಮಣ್ಣು ಮೊದಲಾದವುಗಳನ್ನು ಪೂರ್ಣವಾಗಿ ತೆರವುಗೊಳಿಸಿದ ಬಳಿಕ ಸಂಚಾರಕ್ಕೆ ಪೂರ್ಣ ವಾಗಿ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿವಾರಣಾ ಪ್ರಾಧಿಕಾರ ಅಧ್ಯಕ್ಷರಾಗಿರುವ . ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ರಸ್ತೆ ಮೇಲೆ ಬಿದ್ದಿರುವ ಮಣ್ಣು, ಕಲ್ಲುಗಳನ್ನು ತೆರವು ಗೊಳಿಸಿದ ಬಳಿಕ ಹಗಲು ಸಮಯ ನಿಯಂತ್ರಣಗಳೊಂದಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸ್ಥಳದಲ್ಲಿ ಪೊಲೀಸ್ ಮೊಕ್ಕಾ೦ ಹೂಡಲಾಗಿದೆ. ಪ್ರಯಾಣಿಕರು ಹಾಗೂ ಪರಿಸರದ ನಿವಾಸಿಗಳು ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.